CrimeDistricts

ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ; ಇಬ್ಬರು ದಾರುಣ ಸಾವು!

ವಿಜಯಪುರ; ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿದ್ದಾರೆ.  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ.  ತುಂಬಗಿ ಗ್ರಾಮದ ಮೆಹಬೂಬ್ (35) ಮತ್ತು ಹುಸೇನ್ ​(38) ಮೃತ ದುರ್ದೈವಿಗಳೆಂದು ಗುರುತಿಸಲಾಗಿದೆ.

ತಾಳಿಕೋಟೆಯಿಂದ ಮುದ್ದೇಬಿಹಾಳಕ್ಕೆ ಇಬ್ಬರೂ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Share Post