CrimeDistricts

ಕಾಲೇಜು ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ..!

ಉಡುಪಿ; ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ ಎಂಬ 20 ವರ್ಷ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವಳು. ಬಾಡಿಗೆ ಮನೆಯ ರೂಮ್‌ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಶ್ರೀನಿಧಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..
ಶ್ರೀನಿಧಿ ಮಂಗಳೂರಿನ ಆಳ್ವಾಸ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಇವರ ಕುಟುಂಬ ಹೆರ್ಗ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.. ಶ್ರೀನಿಧಿ ತಂದೆ ಮಹೇಶ್‌ ಅವರು ಡಯಾಲಿಸಿಸ್‌ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.. ಆದ್ರೆ ಅದೇನಾಯ್ತೋ ಏನೋ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಕಾರಣ ಇನ್ನೂ ಗೊತ್ತಾಗಿಲ್ಲ.. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

Share Post