CrimeNational

ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ; 6 ಮಂದಿ ದುರ್ಮರಣ

ಜಮ್ಷೆಡ್‌ಪುರ; ಹೊಸ ವರ್ಷದ ಸಂಭ್ರಮದಲ್ಲಿರುವಾಗಲೇ ಕಾರೊಂದು ಭೀಕರ ಅಪಘಾತಕ್ಕೀಡಾಗಿದ್ದು, ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಐವರು ಸ್ಥಳದಲ್ಲೇ ಮೃತಪಟ್ಟರೆ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಜಾರ್ಖಂಡ್​​ನ ಜಮ್ಶೆಡ್ಪುರದಲ್ಲಿ ಇಂದು ಬೆಳಗಿನಜಾವ ಈ ದುರಂತ ನಡೆದುಹೋಗಿದೆ.

ಕಾರಿನಲ್ಲಿ ಎಂಟು ಮಂದಿ ಪ್ರಯಾಣ ಮಾಡುತ್ತಿದ್ದರು. ಇದರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಉಳಿದಿಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು  ಮಾಡಲಾಗಿದೆ. ಎಲ್ಲರೂ ಆದಿತ್ಯಪುರ ನಿವಾಸಿಗಳೆಂದು ತಿಳಿದುಬಂದಿದೆ. ಕಾರು ಅತಿವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿದೆ. ಅತಿವೇಗದಲ್ಲೇ ಕಾರು ಡಿವೈಡರ್‌ಗೆ ಗುದ್ದಿದ್ದು, ಬಹುತೇಕ ಕಾರು ನಜ್ಜುಗುಜ್ಜಾಗಿದೆ.

 

Share Post