Crime

ಸೂರತ್‌ನಲ್ಲಿ ಬೆಂಕಿ ದುರಂತ; ಖಾಸಗಿ ಬಸ್‌ ಭಸ್ಮ

ಸೂರತ್‌: ಇಲ್ಲಿನ ಹೀರಾಬಾಗ್‌ ಪ್ರದೇಶದಲ್ಲಿ ಕಳೆದ ರಾತ್ರಿ ಭಾರಿ ಅಗ್ನಿ ಅವಘಡ ನಡೆದಿದೆ. ಖಾಸಗಿ ಬಸ್‌ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್‌ ಸಂಪೂರ್ಣ ಸುಟ್ಟು ಕರಕಲಾಗಿದೆ. ದುರ್ಘಟನೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಖಾಸಗಿ ಬಸ್‌ ಸೂರತ್‌ನಿಂದ ಸೌರಾಷ್ಟ್ರಕ್ಕೆ ತೆರಳುತ್ತಿತ್ತು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ. ಬಸ್‌ನಲ್ಲಿನ ಎಸಿ ಕಂಪ್ರೆಸರ್‌ ಸ್ಫೋಟಗೊಂಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

 

Share Post