BengaluruCrime

ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಂಗಳೂರು; ನರ್ಸಿಂಗ್‌ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಬೆಂಗಳೂರಿನ ಮದತ್‌ ಥೆರೆಸಾ ನರ್ಸಿಂಗ್‌ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ ದಿಯಾ ಮಂಡೋಲ್‌ ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ..

ಪಶ್ಚಿಮ ಬಂಗಾಳ ಮೂಲದ ಈಕೆ, ಮದರ್‌ ಥೆರಸಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.. ಈಕೆ ಹಾಸ್ಟೆಲ್‌ನಲ್ಲಿ ತಂಗಿದ್ದಳು.. ಆದ್ರೆ ಏನು ಕಾರಣವೋ ಗೊತ್ತಿಲ್ಲ. ಹಾಸ್ಟೆಲ್‌ನ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.. ಕೌಟುಂಬಿಕ ಸಮಸ್ಯೆಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.. ಜಾಲಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

 

Share Post