ಎಸ್‌ಪಿ ಕಚೇರಿ ಎದುರಲ್ಲೇ ಪತ್ನಿಗೆ ಚೂರಿಯಿಂದ ಇರಿದ ಪೊಲೀಸ್ ಕಾನ್ಸ್‌ಟೇಬಲ್!
ಹಾಸನ; ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರಲ್ಲೇ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬ ತನ್ನ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.. ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಈ ಘಟನೆ ನಡೆದಿದೆ.. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.. ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಎಂಬಾತನೇ ತನ್ನ ಪತ್ನಿಗೆ ಚಾಕುವಿನಿಂದ ಇರಿದಿರುವಾತ.. ಕಾನ್ಸ್ ಟೇಬಲ್ ಲೋಕನಾಥ್ ಹಾಗೂ ಪತ್ನಿ ಮಮತಾ ನಡುವೆ ಕೆಲ ದಿನಗಳಿಂದ ಜಗಳ ಏರ್ಪಟ್ಟಿತ್ತು.. ದಿನವೂ ಇಬ್ಬರ ನಡುವೆ ಕಲಹಗಳಾಗುತ್ತಿದ್ದವು.. ಈ ಹಿನ್ನೆಲೆಯಲ್ಲಿ ಗಂಡನ ವಿರುದ್ಧ ದೂರು ನೀಡಲು ಮಮತಾ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇಗೆ ಆಗಮಿಸಿದ್ದರು. ಈ ವೇಳೆ ಕಚೇರಿ ಎದುರಲ್ಲೇ ಪ್ರತ್ಯಕ್ಷನಾದ ಪತಿ ಲೋಕನಾಥ್ ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ..
ಚಾಕು ಇರಿತದಿಂದ ಮಮತಾಗೆ ತೀವ್ರ ರಕ್ತಸ್ರಾವವಾಗಿತ್ತು.. ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮಮತ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ..