CrimeNational

ಯುವತಿಯನ್ನು ಒತ್ತೆಯಾಳಾಗಿರಿಸಿಕೊಂಡು ಚಿತ್ರಹಿಂಸೆ ನೀಡಿದ ಪಾಪಿ

ಭೋಪಾಲ್; ಯುವತಿಯನ್ನು ಒತ್ತೆಯಾಳಾಗಿಟ್ಟುಕೊಂಡು ನಿತ್ಯ ಲೈಂಗಿಕ ದೌರ್ಜನ್ಯ ನಡೆಸಿ ಚಿತ್ರ ಹಿಂಸೆ ನೀಡುವ ಘಟನೆ ವರದಿಯಾಗಿದೆ. ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಈ ಕೃತ್ಯ ಎಸಗಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

   ಅಯಾನ್ ಪಠಾಣ್ ಎಂಬ ಆರೋಪಿ 23 ವರ್ಷದ ಯುವತಿಯನ್ನು ಒಂದು ತಿಂಗಳಿಂದ ಒತ್ತೆಯಾಳಾಗಿ ಇಟ್ಟುಕೊಂಡಿದ್ದ ಎಂದು ತಿಳಿದು ಬಂದಿದೆ. ಈ ವೇಳೆ ಆರೋಪಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜೊತೆಗೆ ಕಣ್ಣಿಗೆ, ಬಾಯಿಗೆ ಖಾರದಪುಡಿ ಹಾಕಿ ಚಿತ್ರಹಿಂಸೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

  ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿ ಹಾಗೂ ಆರೋಪಿ ಅಕ್ಕಪಕ್ಕದ ಮನೆಯವರು. ಹೀಗಾಗಿ ಇಬ್ಬರ ನಡುವೆ ಸಲುಗೆ ಇತ್ತು. ಇದನ್ನು ತಿಳಿದ ಯುವತಿಯ ತಾಯಿ ಮಗಳನ್ನು ಊರಿಗೆ ಕರೆದುಕೊಂಡು ಹೋಗಿದ್ದಳು. ಅನಂತರ ಯುವತಿ ಆತನ ಜೊತೆ ಹೋಗಿದ್ದಳು. ಈ ವೇಳೆ ಆರೋಪಿ ಚಿತ್ರಹಿಂಸೆ ನೀಡಿದ್ದಾನೆ ಎಂದು ತಿಳಿದುಬಂದಿದೆ.

 

Share Post