CrimeNational

ದರೋಡೆಗೆಂದು ಬಂದವರು ಮಹಿಳೆ ಮೇಲೆ ಗ್ಯಾಂಗ್‌ ರೇಪ್‌!

ಒಡಿಶಾ; ದರೋಡೆಗೆಂದು ಅಪಾರ್ಟ್‌ಮೆಂಟ್‌ಗೆ ನುಗ್ಗದ ದುಷ್ಕರ್ಮಿಗಳು ಫ್ಲ್ಯಾಟ್‌ನಲ್ಲಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.. ಒಡಿಶಾದ ಭುವನೇಶ್ವರಲ್ಲಿ ಈ ಘಟನೆ ನಡೆದಿದೆ.. ಫ್ಲ್ಯಾಟ್‌ನಲ್ಲಿದ್ದ ಚಿನ್ನಾಭರಣ ದೋಚಿದ್ದಲ್ಲದೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ..
ಬೆಳಗಿನಜಾವ 2 ಗಂಟೆ ಸುಮಾರಿಗೆ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ ಒಂದಕ್ಕೆ ನುಗ್ಗಿದ ದರೋಡೆಕೋರರು, ಮನೆಯಲ್ಲಿದ್ದ ಚಿನ್ನಾಭರಣ, ಮೊಬೈಲ್‌ಗಳನ್ನು ಕಿತ್ತುಕೊಂಡಿದ್ದಾರೆ.. ಚಾಕು ತೋರಿಸಿ ಮಹಿಳೆಗೆ ಬೆದರಿಸಿರುವ ಆಗಂತುಕರು, ಎರಡು ವರ್ಷದ ಮಗುವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.. ನಂತರ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ..
ಅತ್ಯಾಚಾರಕ್ಕೊಳಗಾದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಹತ್ತು ದಿನಗಳ ಹಿಂದಷ್ಟೇ ಈ ಫ್ಲ್ಯಾಟ್‌ಗೆ ಶಿಫ್ಟ್‌ ಆಗಿದ್ದಳು ಎಂದು ತಿಳಿದುಬಂದಿದೆ.. ಬಿದಿರಿನ ಏಣಿಯನ್ನು ಬಳಸಿರುವ ದರೋಡೆಕೋರರು ಫ್ಲ್ಯಾಟ್‌ ಪ್ರವೇಶ ಮಾಡಿದ್ದಾರೆ.. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.. ಅಪಾರ್ಟ್‌ಮೆಂಟ್‌ನಲ್ಲಿ ಸಿಸಿಟಿವಿ ಇಲ್ಲದ ಕಾರಣ ತನಿಖೆಗೆ ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ..

Share Post