CrimeNational

ಯುವತಿಯನ್ನು ಮರಕ್ಕೆ ಕಟ್ಟಿ ಅಮಾನುಷ ಹಲ್ಲೆ

ರಾಜಸ್ಥಾನ; ಯುವತಿಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಲಾಗಿದೆ. ಈ ಪೈಶಾಚಿಕ ಕೃತ್ಯದ ವಿಡಿಯೋ ವೈರಲ್ ಆಗುತ್ತಿದೆ. ರಾಜಸ್ಥಾನದಲ್ಲಿ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ.

  ರಾಜಸ್ಥಾನ್ ನ ಸಂಚೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಂಗಳರಾಮ್ ಹಾಗೂ ಹೀರಾಮ್ ಎಂಬುವವರೇ ಹಲ್ಲೆ ಮಾಡಿದವರು. ಕೃತ್ಯಕ್ಕೆ ಕಾರಣ ಗೊತ್ತಾಗಿಲ್ಲ.. ಇಬ್ಬರೂ ಆರೋಪಿಗಳನ್ನೂ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

 

Share Post