ಮುಸ್ಲಿಮರ ಮೀಸಲಾತಿ ರದ್ದು ವಿಚಾರ; ರಾಜಕೀಯ ಹೇಳಿಕೆಗಳಿಗೆ ಸುಪ್ರೀಂ ಗರಂ
ನವದೆಹಲಿ; ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಪಡಿಸಿರುವ ಕುರಿತು ರಾಜಕೀಯ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಕೋರ್ಟ್, ವಿಚಾರಣಾ ಹಂತದಲ್ಲಿರುವ ಪ್ರಕರಣದ ಕುರಿತು ಮಾತನಾಡುವಾಗ ಜಾಗ್ರತೆ ಇರಬೇಕು ಎಂದು ಹೇಳಿದೆ.
ನ್ಯಾ. ಕೆಎಂ ಜೋಸೆಫ್, ಬಿವಿ ನಾಗರತ್ನ, ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ತ್ರಿಸದಸ್ಯ ಪೀಠ, ಮೀಸಲಾತಿ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿತು. ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಯಾವುದೇ ಹೇಳಿಕೆಗಳನ್ನು ನೀಡಬಾರದು. ರಾಜಕೀಯಕ್ಕೂ ಈ ವಿಚಾರಕ್ಕೂ ಸಂಬಂಧವಿಲ್ಲ ಎಂದು ಕೋರ್ಟ್ ಹೇಳಿದೆ. ಜೊತೆಗೆ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಲಾಗಿದೆ.