CrimeDistricts

ಹುಬ್ಬಳ್ಳಿಯಲ್ಲಿ ಬಸ್-ಕಾರು ಡಿಕ್ಕಿ; 1 ಸಾವು, 5 ಗಂಭೀರ

ಹುಬ್ಬಳ್ಳಿ: ಇಲ್ಲಿನ ತಾರಿಹಾಳ ಬೈಪಾಸ್‌ ಬಳಿ ಖಾಸಗಿ ಬಸ್‌ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಖಾಸಗಿ ಬಸ್‌ ಮುಂಬೈನಿಂದ ಬೆಂಗಳೂರಿಗೆ ಆಗಮಿಸುತ್ತಿತ್ತೆಂದು ತಿಳಿದುಬಂದಿದೆ. ಕಾರು ಹುಬ್ಬಳ್ಳಿಯಿಂದ ಬೆಳಗಾವಿಗೆ ಹೋಗುತ್ತಿತ್ತು. ಬೆಳಗಿನ ಜಾವ ತಾರಿಹಾಳ ಬೈಪಾಸ್‌ ಬಳಿ ಎರಡು ಮಧ್ಯೆ ಡಿಕ್ಕಿ ಸಂಭವಿಸಿದೆ. ಗಾಯಗೊಂಡ ಐವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 

 

Share Post