Crime

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ದಾರುಣ ಸಾವು

ಪೆದ್ದಪಲ್ಲಿ: ತೆಲಂಗಾಣದ ಪೆದ್ದಪಲ್ಲಿ ಸಮೀಪದ ಗಂಗಾನಗರದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ದಂಪತಿ ಹಾಗೂ ಮಗು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಚಲಿಸುತ್ತಿದ್ದ ಆಟೋ ಮೇಲೆ ಲಾರಿಯೊಂದು ಉರುಳಿಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ಶೇಖ್​ ಶಕೀಲ್​, ರೇಷ್ಮಾ ಹಾಗೂ ಮಗುವೊಂದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಎರಡು ತಿಂಗಳ ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post