CrimeDistricts

ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯ ನಡೆದಿದೆ. ಯುವಕನೊಬ್ಬ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಮಂಗಳೂರು ಬಳಿಯ ಕಡಬದಲ್ಲಿ ಈ ಕೃತ್ಯ ಎಸಗಲಾಗಿದೆ.

  ಅಬಿನ್ ಎಂಬಾತ ಈ ಕೃತ್ಯ ಎಸಗಿದ್ದು, ಆತನನ್ನು ಕಡಬ ಪೊಲೀಸರು ಬಂಧಿಸಿ‌ ವಿಚಾರಣೆ ನಡೆಸುತ್ತಿದ್ದಾರೆ. ಮೂವರೂ ವಿದ್ಯಾರ್ಥಿನಿಯರ ಮುಖಕ್ಕೆ ಆಸಿಡ್ ಎರಚಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

  ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಈ ಕೃತ್ಯ ಎಸಗಲಾಗಿದೆ. ಮೂವರೂ ವಿದ್ಯಾರ್ಥಿನಿಯರು ಶಾಲಾ ಆವರಣದಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಈ ವೇಳೆ ಆರೋಪಿ ಆಸಿಡ್ ದಾಳಿ ಮಾಡಿದ್ದಾನೆ. ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಎಂಬುದಾಗಿ ತಿಳಿದುಬಂದಿದೆ. ಮಾಸ್ಕ್ ಹಾಗೂ ಹ್ಯಾಟ್ ಧರಿಸಿಕೊಂಡು ಬಂದು ಈ ಕೃತ್ಯ ಎಸಗಿದ್ದಾನೆ.

  ಗಾಯಗೊಂಡ ವಿದ್ಯಾರ್ಥಿನಿಯರಿಗೆ ಮೊದಲು ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಮಂಗಳೂರಿನ ಆಸ್ಪತ್ರೆ ರವಾನಿಸಲಾಗಿದೆ. ಕೃತ್ಯಕ್ಕೆ ಕಾರಣ ಏನು ಅನ್ನೋದು ಗೊತ್ತಾಗಿಲ್ಲ. ಆರೋಪಿಗೆ ಆಸಿಡ್ ಹೇಗೆ ಸಿಕ್ತು? ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share Post