CrimeNational

ಅಂಕಿತಾ ಭಂಡಾರಿ ಕೊಲೆ ಪ್ರಕರಣ; ಅತ್ಯಾಚಾರ ನಡೆದಿಲ್ಲ ಎಂದು ವಿಧಿ ವಿಜ್ಞಾನ ವರದಿ

ಡೆಹ್ರಾಡೂನ್; ಉತ್ತರಾಖಂಡದಲ್ಲಿ ಇತ್ತೀಚೆಗೆ ಕೊಲೆಯಾದ ರೆಸಾರ್ಟ್‌ ರರಿಸೆಪ್ಷನಿಸ್ಟ್‌ ಅಂಕಿತಾ ಭಂಡಾರಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ವಿಧಿ ವಿಜ್ಞಾನ ಪ್ರಯೋಗಾಲಯ ಹೇಳಿದೆ. ಅತ್ಯಾಚಾರ ಮಾಡಿ ಕೊಲೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಲೆಯಾದ ಅಂಕಿತಾ ಅವರ ಗುಪ್ತಾಂಗದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿಲ್ಲ.

ರೆಸಾರ್ಟ್‌ಗೆ ಭೇಟಿ ನೀಡಿದ್ದ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ನಿರಾಕರಿಸಿದ್ದಕ್ಕೆ ಅಂಕಿತಾ ಭಂಡಾರಿ ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಅಂಕಿತಾ ಕುಟುಂಬಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್ ಧಾಮಿ, 25 ಲಕ್ಷ ರೂಪಾಯಿ ನೆರವು ಘೋಷಿಸಿದ್ದರು.‌‌

Share Post