ಮತ್ತೆ 14 ಮಂದಿ ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್
ಬೆಂಗಳೂರು; ಬೆಂಗಳೂರಿನ ಜಿಗಣಿ ಹಾಗೂ ತುಮಕೂರು ರಸ್ತೆಯಲ್ಲಿ ಪಾಕಿಸ್ತಾನದಿಂದ ಬಂದು ಹಿಂದೂ ಹೆಸರುಗನ್ನಿಟ್ಟುಕೊಂಡು ವಾಸ ಮಾಡುತ್ತಿದ್ದ ಹಲವರನ್ನು ಬಂಧಿಸಲಾಗಿತ್ತು.. ಪಾಕಿಸ್ತಾನದಿಂದ ಬಂದು ಅಕ್ರಮವಾಗಿ ನೆಲೆಸಿದ್ದವರ ಪತ್ತೆ ಕಾರ್ಯ ಮುಂದುವರೆದಿದ್ದು, ದೇಶ್ಯಾದ್ಯಂತ ಮತ್ತೆ 14 ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದೆ.. ಚೆನ್ನೈ, ದೆಹಲಿ, ಹೈದರಾಬಾದ್‌ಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಲಾಗಿದೆ.. ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ ಒಟ್ಟು 22 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.. ಇದರಲ್ಲಿ ಬೆಂಗಳೂರಿನಲ್ಲಿಯೇ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ..
ಪ್ರಕರಣದ ಕಿಂಗ್ ಪಿನ್ ಪರ್ವೇಜ್ ಬಂಧನದ ಬೆನ್ನಲ್ಲೇ ದೇಶದ ಹಲವು ಕಡೆ ಪಾಕಿಸ್ತಾನಿ ಪ್ರಜೆಗಳು ವಾಸ ಮಾಡುತ್ತಿರುವ ಬಗ್ಗೆ ಮಾಹಿತಿ ಗೊತ್ತಾಗಿದ್ದು, ಬೆಂಗಳೂರು ಪೊಲೀಸರು ಬಂಧಿಸಿ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.. ಜಿಗಣಿಯಲ್ಲಿ ಪಾಕಿಸ್ತಾನದ ಮೂಲದ ಕುಟುಂಬ ವಾಸಿಸುತ್ತಿರುವುದು ಗೊತ್ತಾಗಿತ್ತು.. ಪೊಲೀಸರು ದಾಳಿ ನಡೆಸಿ ಅವರನ್ನು ಬಂಧಿಸಲಾಗಿತ್ತು.. ಅನಂತರ ನಾಲ್ವರನ್ನು ಬಂಧಿಸಿದ್ದರು.. ಇದೀಗ ಪೊಲೀಸರು 4 ತಂಡಗಳನ್ನು ರಚಿಸಿಕೊಂಡು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿದೆ..