CrimeNational

ಉಗ್ರರ ವಿರುದ್ಧದ ಕಾರ್ಯಾಚರಣೆ; ಸೇನೆಯ ಶ್ವಾನ ಸಾವು

ಶ್ರೀನಗರ; ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಸೇನೆಯ ಶ್ವಾನ ಝೂಮ್‌ ಸಾವನ್ನಪ್ಪಿದೆ. ಅನಂತ್‌ನಾಗ್ ಜಿಲ್ಲೆಯಲ್ಲಿ ಉಗ್ರರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಶ್ವಾನ ತೀವ್ರವಾಗಿ ಗಾಯಗೊಂಡಿತ್ತು. ನಂತರ ಶಸ್ತ್ರಚಿಕಿತ್ಸೆ ಮಾಡಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅದು ಸಾವನ್ನಪ್ಪಿದೆ.

ಸುಧಾರಿತ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಶ್ವಾನ ಝೂಮ್‌ಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಅದು ಮಧ್ಯಾಹ್ನ 12ರ ಸುಮಾರಿಗೆ ಸಾವನ್ನಪ್ಪಿದೆ. ಬೆಳಿಗ್ಗೆ 11.45ರವರೆಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಶ್ವಾನ ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಕೊಕೆರ್‌ ನಾಗ್‌ನಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗುಂಡು ತಗುಲಿ ಶ್ವಾನ ಗಾಯಗೊಂಡಿತ್ತು. ಶ್ವಾನ ಝೂಮ್‌ಗೆ ಎರಡು ಗುಂಡು ತಗುಲಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು.

Share Post