CrimeNational

ಅರುಣಾಚಲ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್‌ ಪತನ

ಇಟಾನಗರ; ಅರುಣಾಚಲ ಪ್ರದೇಶದ ಸಿಯಾಂಗ್‌ ಜಿಲ್ಲೆಯ ದುರ್ಗಮ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಮಿಗ್ಗಿಂಗ್ ಗ್ರಾಮದ ಬಳಿ ಹೆಲಿಕಾಪ್ಟರ್‌ ಪತನವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರಕ್ಷಣಾ ತಂಡಗಳು ಆಗಮಿಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ.

ಇಂದು ಪತನವಾದ ಹೆಲಿಕಾಪ್ಟರ್ ಹಿಂದೂಸ್ತಾನ್ ಏರೋನಾಟಿಕಲ್ಸ್ ಲಿಮಿಟೆಡ್ ತಯಾರಿಸಿದೆ ಎಂದು ತಿಳಿದುಬಂದಿದೆ. ರುದ್ರ ಎಂದು ಕರೆಯಲಾಗುವ ಈ ಹೆಲಿಕಾಪ್ಟರ್‌ ಪತನವಾಗಿದ್ದು ಯಾಕೆ ಎಂಬುದರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ. ಸಾವು ನೋವಿನ ಬಗ್ಗೆಯೂ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Share Post