ಪಾಕಿಸ್ತಾನದ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ-30ಮಂದಿ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ
ಪೇಶಾವರ: ಪ್ರಾರ್ಥನಾ ಸಮಯದಲ್ಲಿ ಮಸೀದಿಯಲ್ಲಿ ಬಾಂಬ್ ಸ್ಫೋಟಗೊಂಡು ಮೂವತ್ತು ಮಂದಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಪೇಶಾವರದಲ್ಲಿ ನಡೆದಿದೆ. ದುರಂತದಲ್ಲಿ ಐವತ್ತಕ್ಕೂ ಹೆಚ್ಚು ಜನರಿಗೆ ಗಂಭೀಯ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗ್ತಿದೆ ಎಂದು ಪಾಕ್ ಮಾಧ್ಯಮವೊಂದು ವರದಿ ಮಾಡಿದೆ.
ಪಾಕಿಸ್ತಾನ್‌ನ ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಭಕ್ತರು ಶುಕ್ರವಾರ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ರು. ಕನಿಷ್ಠ 30 ಜನರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಫೋಟದ ಹೊಣೆಯನ್ನು ಇದುವರೆಗೂ ಯಾವುದೇ ಭಯೋತ್ಪಾದಕ ಗುಂಪು ಹೊತ್ತಿಕೊಂಡಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಗಾಯಗೊಂಡಿರುವ 50 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ದಾಳಿಕೋರರು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿದರು ಈ ವೇಳೆ ಮಸೀದಿ ಬಳಿ ಕಾವಲು ನಿಂತ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ರು ಎಂದು ಪೇಶಾವರ್ ನಗರ ಪೊಲೀಸ್ ಆಯುಕ್ತ ಇಜಾಜ್ ಅಹ್ಸಾನ್ ಹೇಳಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ. ಗುಂಡಿನ ದಾಳಿಯ ನಂತರ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ.
Around 30 people injured as a bomb explodes at a mosque in Peshawar's Kocha Risaldar area: Pakistan media
— ANI (@ANI) March 4, 2022