BengaluruCrime

ಮೂವರು ಡ್ರಗ್‌ ಪೆಡ್ಲರ್‌ಗಳ ಬಂಧನ; 90 ಲಕ್ಷ ಮೌಲ್ಯದ ಮಾದಕ ದ್ರವ್ಯ ವಶ

ಬೆಂಗಳೂರು; ಮಾದಕ ವಸ್ತು ಮಾರಾಟ ಜಾಲವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಇಂದು ಕಾರ್ಯಾಚರಣೆ ನಡೆಸಿರುವ ಪೊಲೀಸರು ಮೂವರು ಡ್ರಗ್‌ ಪೆಡ್ಲರ್‌ಗಳನ್ನು ಬಂಧಿಸಿದ್ದು, ಅವರಿಂದ 90 ಲಕ್ಷ ರೂಪಾಯಿ ಮೌಲ್ಯದ ಮಾದಕದ್ರವ್ಯವನ್ನು ವಶಕ್ಕೆ ಪಡೆದಿದ್ದಾರೆ.

ಸುಮಿತ್ರ, ಸೀತಾ ಹಾಗೂ ಚಂದ್ರಶೇಖರ್‌ ಎಂಬುವವರೇ ಬಂಧಿತ ಆರೋಪಿಗಳು. ಬಂಧಿತರಿಂದ 940 ಗ್ರಾಂ ತೂಕದ ಆಶಿಶ್‌ ಆಯಿಲ್‌, 10 ಕೆಜಿ ಗಾಂಜಾ ಹಾಗೂ ಎರಡು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸಿಸಿಬಿ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಮಾಧಕ ವಸ್ತುಗಳನ್ನು ಎಲ್ಲಿಂದ ತರಲಾಗುತ್ತಿತ್ತು.. ಆರೋಪಿಗಳ ಹಿನ್ನೆಲೆ ಏನು ಎಂಬುದರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

 

Share Post