ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಮೇಲೆ ತಮಿಳುನಾಡಿನಲ್ಲಿ ಹಲ್ಲೆ
ಚೆನ್ನೈ; ಕೇರಳದ ಶಬರಿ ಮಲೈನಲ್ಲಿರುವ ಅಯ್ಯಪ್ಪನ ದರ್ಶನಕ್ಕೆ ದೇಶದ ನಾನಾ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಅಯ್ಯಪ್ಪ ಮಾಲೆ ಧರಿಸಿ ವ್ರತಾಚರಣೆ ಮಾಡಿ, ಅಯ್ಯಪ್ಪನ ದರ್ಶನಕ್ಕೆ ಬರುತ್ತಾರೆ. ಹೀಗೆ ದರ್ಶನಕ್ಕೆ ಬರುವ ಭಕ್ತರ ಮೇಲೆ ಹಲ್ಲೆ ನಡೆದಿದೆ. ಅಯ್ಯಪ್ಪನ ದರ್ಶನ ಪಡೆದ ನಂತರ ತಮಿಳುನಾಡಿನ ರಂಗನಾಥ ಸ್ವಾಮಿ ದೇಗುಲದಲ್ಲಿ ಪೂಜೆಗೆ ಆಗಮಿಸಿದ್ದ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ಮಾಡಲಾಗಿದೆ.
ರಂಗನಾಥ ಸ್ವಾಮಿ ದೇಗುಲದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಕೆಲವರಿಗೆ ವಿಶೇಷ ದರ್ಶನದ ಅವಕಾಶ ನೀಡಿದೆ. ಆದ್ರೆ ನಾವು ಆಗಿನಿಂದ ಕ್ಯೂನಲ್ಲಿ ನಿಂತಿದ್ದೇವೆ. ಈಗ ನೀವು ನಿಮಗೆ ಬೇಕಾದವರಿಗೆ ಬೇಗ ದರ್ಶನಕ್ಕೆ ಅವಕಾಶ ಕೊಟ್ಟರೆ ಹೇಗೆಂದು ಅಯ್ಯಪ್ಪ ಭಕ್ತರು ಪ್ರಶ್ನೆ ಮಾಡಿದ್ದಾರೆ.
ಇದರಿಂದಾಗಿ ಸ್ಥಳದಲ್ಲಿ ಘರ್ಷಣೆ ಉಂಟಾಗಿದೆ. ಈ ವೇಳೆ ಮಾಲಾಧಾರಿಗಳ ಮೇಲೆ ಹಲ್ಲೆ ಮಾಡಲಾಗಿದೆ. ಇದನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಖಂಡಿಸಿದ್ದಾರೆ.