CrimeDistricts

ಏಳು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನ; ಷಫಿ ಎಂಬಾತನಿಗೆ ಧರ್ಮದೇಟು

ತುಮಕೂರು; ಭಿಕ್ಷೆ ಬೇಡುತ್ತಿದ್ದ ಏಳು ವರ್ಷದ ಬಾಲಕಿಯನ್ನು ಪುಸಲಾಯಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಕಾಮುಕನೊಬ್ಬ ಸಾರ್ವಜನಿಕರಿಗೆ ಸಿಕ್ಕಿಬಿದ್ದಿದ್ದಾನೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಆಟೋ ಚಾಲಕನಾಗಿರುವ ಷಫಿ ಎಂಬಾತನೇ ಆರೋಪಿ. ತುಮಕೂರಿನ ಶಾಂತಿನಗರದ ಗೂಡ್‌ಶೆಡ್‌ ಕಾಲೋನಿ ನಿವಾಸಿಯಾಗಿರುವ ಷಫಿ ಆಟೋ ಓಡಿಸುತ್ತಾರೆ. ಈತನಿಗೆ ರೈಲ್ವೆ ಸ್ಟೇಷನ್‌ ಹಾಗೂ ಬಸ್‌ ನಿಲ್ದಾಣದಲ್ಲಿ ಭಿಕ್ಷೆ ಬೇಡುವ ಏಳು ವರ್ಷದ ಬಾಲಕಿ ಪರಿಚಯವಾಗಿದ್ದಾಳೆ. ಆಕೆಗೆ ತಿನ್ನೋಕೆ ಕೊಡಿಸುತ್ತೇನೆ ಎಂದು ಪುಸಲಾಯಿಸಿ, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ.
ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಆತ ಪ್ರಯತ್ನಿಸುತ್ತಿದ್ದ. ಈ ವೇಳೆ ಸಾರ್ವಜನಿಕರಿಗೆ ಆತ ಸಿಕ್ಕಿಬಿದ್ದಿದ್ದಾನೆ. ಸಾರ್ವಜನಿಕರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಗೆ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಯನ್ನು ತಮಕೂರಿನ ಬಾಲಮಂದಿರಕ್ಕೆ ರವಾನಿಸಲಾಗಿದೆ.

Share Post