CrimeNational

ಪ್ರಿಯತಮೆಗೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ!

ಕೋಲ್ಕತ್ತಾ; ಕೋಲ್ಕತ್ತಾದಲ್ಲಿ ದಾರುಣ ಘಟನೆಯೊಂದು ನಡೆದಿದೆ.. ಕ್ಷುಲ್ಲಕ ಕಾರಣಕ್ಕೆ ಪ್ರಿಯಕರನೊಬ್ಬ ತನ್ನ ಪ್ರಿಯತಮೆ ಮೇಲೆ ಗುಂಡು ಹಾರಿಸಿದ್ದಾನೆ.. ಅನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಇತ್ತ ಪ್ರಿಯತಮೆ ಗುಂಡು ತಗುಲಿದ್ದರಿಂದ ತೀವ್ರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ..

ಪಶ್ಚಬಂಗಾಳದ ದಕ್ಷಿಣ ಪರಗಣ ಜಿಲ್ಲೆಯ ಸಂತೋಷಪುರ ನಿವಾಸಿ ರಾಜೇಶ್ ಕುಮಾರ್ ಎಂಬಾತನೇ ಈ ಕೃತ್ಯ ಎಸಗಿರುವಾತ.. ದಕ್ಷಿಣ ಕೋಲ್ಕತ್ತದ ಗೆಸ್ಟ್‌ ಹೌಸ್‌ ಒಂದರಲ್ಲಿ ರಾಜೇಶ್ ಕುಮಾರ್ ತನ್ನ ಪ್ರಿಯತಮೆ ಮೇಲೆ ಗುಂಡು ಹಾರಿಸಿದ್ದಾನೆ.. ಇಬ್ಬರೂ ಕೂಡಾ ಗೆಸ್ಟ್‌ ಹೌಸ್‌ನಲ್ಲಿ ತಂಗಿದ್ದರು.. ಇದೇ ವೇಳೆ ಗಲಾಟೆ ನಡೆದಿದ್ದು, ಆಗ ಆಕ್ರೋಶಗೊಂಡ ರಾಜೇಶ್‌ ಆಕೆ ಮೇಲೆ ಗುಂಡು ಹಾರಿಸಿದ್ದಾನೆ.. ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಆದ್ರೆ ಪ್ರಿಯತಮೆ ಗಂಭೀರವಾಗಿ ಗಾಯಗೊಂಡಿದ್ದಾರೆ..

ಆರೋಪಿಯ ಬಳಿಯಿಂದ 9 ಎಂಎಂ ಪಿಸ್ತೂಲ್‌ ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ..

 

Share Post