CrimeNational

ಪೂಂಚ್‌ ಜಿಲ್ಲೆಯಲ್ಲಿ ಬಸಗಗ ದುರಂತ; 11 ಮಂದಿ ದುರ್ಮರಣ

ಜಮ್ಮು ಕಾಶ್ಮೀರ; ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭೀಕರ ದುರಂತವೊಂದು ನಡೆದುಹೋಗಿದೆ.  ಮಿನಿ ಬಸ್ ಒಂದು ಕಂದಕಕ್ಕೆ ಉರುಳಿಬಿದ್ದಿದ್ದು, 11 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ 26 ಮಂದಿಗೆ  ಗಾಯಗಳಾಗಿದ್ದು, ತೀವ್ರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪೂಂಚ್ ಜಿಲ್ಲೆಯ ಸವ್ಜಿಯಾನ್ ಎಂಬ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ರಕ್ಷಣಾ  ಕಾರ್ಯಗಳು ಮುಂದುವರೆದಿವೆ.

     ಅಪಘಾತದ ಸ್ಥಳದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು,  ಬಸ್‌ನ ಸುತ್ತಲೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ.  ಬದುಕುಳಿದವರನ್ನು ಹೊರತೆಗೆಯಲು ಸ್ಥಳೀಯರು ಮತ್ತು ಆಡಳಿತವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Share Post