CrimeNationalPolitics

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್‌; ಜಾಮೀನು ರದ್ದುಗೊಳಿಸಲ್ಲ ಎಂದ ಸುಪ್ರೀಂ!

 

ನವದೆಹಲಿ; ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣು ಅವರಿಗೆ ನೀಡಿರುವ ಜಾಮೀನು ರದ್ದು ಮಾಡಲು ಸುಪ್ರೀಂ ಕೋರ್ಟ್‌ ನಿರಾಕರಣೆ ಮಾಡಿದೆ.. ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.. ಇದರಿಂದಾಗಿ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ..
ರೇವಣ್ಣ ಅವರ ಮಗ ಪ್ರಜ್ವಲ್‌ ರೇವಣ್ಣ ಅವರು ಹಲವು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ.. ಈ ಸಂಬಂಧ ಅವರನ್ನು ಬಂಧಿಸಿ ಜೈಲಿನಲ್ಲಿಡಲಾಗಿದೆ.. ಇನ್ನು ಸಂತ್ರಸ್ತೆಯರಲ್ಲಿ ಒಬ್ಬರನ್ನು ಅಪಹರಣ ಮಾಡಿ ಬೆದರಿಕೆ ಹಾಕಲಾಗಿತ್ತು ಎಂಬ ದೂರು ದಾಖಲಾಗಿತ್ತು.. ಇದರಲ್ಲಿ ಭವಾನಿ ರೇವಣ್ಣ ಕೂಡಾ ಆರೋಪಿ.. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರು ಹೈಕೋರ್ಟ್‌ ಮೊರೆ ಹೋಗಿ ಜಾಮೀನು ಪಡೆದಿದ್ದಾರೆ.. ಆದ್ರೆ ಈ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.. ಆದ್ರೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಲು ನಿರಾಕರಣೆ ಮಾಡಿದೆ..
ಪ್ರಕರಣದಲ್ಲಿ ಈಗಾಗಲೇ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಲಾಗಿದೆ.. ಇನ್ನು ಭವಾನಿಯವರದ್ದು ರಾಜಕೀಯ ಕುಟುಂಬ ಎಂಬ ಕಾರಣಕ್ಕೆ ಜಾಮೀನು ನಿರಾಕರಣೆ ಮಾಡೋದಕ್ಕೆ ಆಗೋದಿಲ್ಲ. ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದೇನೋ, ಆದ್ರೆ ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯೇ, ಚಾರ್ಜ್‌ ಶೀಟ್‌ ಸಲ್ಲಿಕೆ ಆಗಿದೆ ಅಲ್ಲವೇ..? ಏನಾದರೂ ತೊಂದರೆಯಾಗಿದ್ದರೆ ನಿಮ್ಮ ನೆರವಿಗೆ ಬರಬಹುದಿತ್ತು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ..

Share Post