ಮಾಜಿ ಸಚಿವ ರೇವಣ್ಣಗೆ ಬಿಗ್ ರಿಲೀಫ್; ಜಾಮೀನು ನೀಡಿದ ಎಸಿಎಂಎಂ ಕೋರ್ಟ್
ಬೆಂಗಳೂರು; ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಪ್ ಸಿಕ್ಕಿದೆ.. ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ರೇವಣ್ಣ ಅವರಿಗೆ ಬೆಂಗಳೂರಿನ ಎಸಿಎಂಎಂ ಕೋರ್ಟ್ ಜಾಮೀನು ನೀಡಿದೆ.. ಇದರಿಂದಾಗಿ ರೇವಣ್ಣ ಅವರನ್ನು ಬಂಧನದ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ..
ಮಾಜಿ ಸಚಿವ ರೇವಣ್ಣ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಕೇಸ್ ದಾಖಲು ಮಾಡಿದ್ದರು.. ಈ ಸಂಬಂಧ ಕೋರ್ಟ್ ತಾತ್ಕಾಲಿಕ ಜಾಮೀನು ನೀಡಿತ್ತು.. ರೆಗ್ಯುಲರ್ ಬೇಲ್‌ಗಾಗಿ ಅವರು ಅರ್ಜಿ ಸಲ್ಲಿಸಿದ್ದರು.. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾದೀಶರು ಶನಿವಅರ ತೀರ್ಪು ಕಾಯ್ದಿರಿಸಿದ್ದರು..
ಇಂದು ನ್ಯಾಯಾಧೀಶರು ತೀರ್ಪು ನೀಡಿದ್ದು, ಷರತ್ತು ಬದ್ಧ ಜಾಮೀನು ನೀಡಿದ್ದಾರೆ. 5 ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಡಿ ನೀಡುವಂತೆ ಸೂಚನೆ ನೀಡಲಾಗಿದೆ.. ಇದರಿಂದಾಗಿ ರೇವಣ್ಣ ಅವರು ಬಂಧನದ ಭೀತಿಯಿಂದ ತಪ್ಪಿಸಿಕೊಂಡಿದ್ದಾರೆ..