CrimeDistricts

ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ

ಚಿಕ್ಕಮಗಳೂರು; ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ಘಟನೆ ನಡೆದಿದೆ. ಕಳೆದ ರಾತ್ರಿ ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ್ದು, ಸವಾರರು ಗಂಭೀರ ಗಾಯಗೊಂಡಿದ್ದಾರೆ.

ಕಲ್ಯಾಣಗದ್ದೆ ಗ್ರಾಮದ ದಿಲೀಪ್ ಹಾಗೂ ಆಶಾ ಗಾಯಗೊಂಡ ಬೈಕ್ ಸವಾರರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ ಸವಾರರು ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ ತೆರಳುವಾಗ ಘಟನೆ ನಡೆದಿದೆ. ಕಾಡುಕೋಣ ದಾಳಿಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Share Post