ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಮೂವರು ಕಾರ್ಮಿಕರ ಸ್ಥಿತಿ ಗಂಭೀರ!
ಬೆಳಗಾವಿ; ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.. ಇಲ್ಲಿ ಚಿಕ್ಕಟ್ಟಿ ಗ್ರಾಮದ ಹೊರವಲಯದಲ್ಲಿರುವ ಪ್ರಿಯಾ ಎಕ್ಸ್‌ಪೋರ್ಟ್ ಘಟಕದಲ್ಲಿ ಈ ಘಟನೆ ನಡೆದಿದೆ..
ಕೆಲಸ ಮಾಡುತ್ತಿರುವ ವೇಳೆ ಫ್ಯಾಕ್ಟರಿಯಲ್ಲಿದ್ದ ಬಾಯ್ಲರ್ ಸ್ಫೋಟಗೊಂಡಿದೆ.. ಇದರಿಂದಾಗಿ ಮೂವರು ಕಾರ್ಮಿಕರು ಗಂಭಿರವಾಗಿ ಗಾಯಗೊಂಡಿದ್ದಾರೆ.. ಸತ್ತಿ ಗ್ರಾಮದ ಸುನಂದಾ ಸಿದ್ದಪ್ಪ ಎಂಬುವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಮೂವರು ಗಾಯಾಗಳುಗಳನ್ನು ಅಥಣಿ ಹಾಗೂ ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಿಸಲಾಗಿದೆ..
ಬಾಯ್ಲರ್ ಸ್ಪೋಟದ ತೀವ್ರತೆಗೆ ಕಾರ್ಖಾನೆಯ ಗೋಡೆ ಸಂಪೂರ್ಣ ಬಿರುಕು ಬಿಟ್ಟಿದೆ… ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.