Bomb blast case; ನಾಲ್ವರು ಶಂಕಿತರ ವಿಚಾರಣೆ; ಸಿಕ್ಕಿಬಿದ್ದರಾ ಸ್ಫೋಟ ಆರೋಪಿಗಳು..?
ಬೆಂಗಳೂರು; ನಿನ್ನೆ ನಡೆದ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆ. ಪೊಲೀಸರು ಈಗಾಗಲೇ ನಾಲ್ವರು ಶಂಕಿತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ನಾಲ್ವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಇವತ್ತೇ ಸತ್ಯ ಹೊರಬೀಳುವ ಸಾಧ್ಯತೆ ಇದೆ.
ಇದನ್ನೂ ಓದಿ;Rameshwaram cafe blast; ಬಾಂಬ್ ಸ್ಫೋಟ ಪ್ರಕರಣ; ಶಂಕಿತನ ಚಹರೆ ಪತ್ತೆ!
ಗುಪ್ತಚರ ಇಲಾಖೆ ಅಧಿಕಾರಿಗಳಿಂದ ವಿಚಾರಣೆ;
ಗುಪ್ತಚರ ಇಲಾಖೆ ಅಧಿಕಾರಿಗಳಿಂದ ವಿಚಾರಣೆ; ನಿನ್ನೆ ಮಧ್ಯಾಹ್ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿತ್ತು. ಘಟನೆಯಲ್ಲಿ ಒಂಬತ್ತು ಜನ ಗಾಯಗೊಂಡಿದ್ದು, ಅದರಲ್ಲಿ ಒಬ್ಬರ ಸ್ಥಿತಿ ಸ್ವಲ್ಪ ಗಂಭೀರವಾಗಿದೆ. ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸಿದಾಗ ವ್ಯಕ್ತಿಯೊಬ್ಬ ಕೆಫೆಯಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದಾರೆ. ಸುಮಾರು ಒಂದು ಗಂಟೆ ಕಾಲ ಕೆಫೆಯಲ್ಲೇ ಓಡಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಆತನ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ನಾಲ್ವರನ್ನು ಅನುಮಾನದ ಮೇಲೆ ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾಲ್ವರನ್ನೂ ಅಜ್ಞಾತ ಸ್ಥಳದಲ್ಲಿಟ್ಟು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ; ಪಾಕ್ ಪರ ಘೋಷಣೆ ಕೂಗಿದ್ದು ನಿಜ; ಆರೋಪಿ ಪತ್ತೆಗೆ ತಯಾರಿ
ಬ್ಲಾಸ್ಟ್‌ಗೆ ಅತ್ಯಾಧುನಿಕ ತಂತ್ರಜ್ಞಾನ ಬಳಕೆ;
ಬ್ಲಾಸ್ಟ್‌ಗೆ ಅತ್ಯಾಧುನಿಕ ತಂತ್ರಜ್ಞಾನ ಬಳಕೆ; ಸ್ಫೋಟಕ್ಕೆ ಸುಧಾರಿತ ವಸ್ತುಗಳ ಬಳಕೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬಾಂಬ್ ತಯಾರಿಗೆ ಆರ್‌ಡಿಎಕ್ಸ್, ಅತ್ಯಾಧುನಿಕ ಟೈಮರ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಇದು ಇದ್ದಕ್ಕಿದ್ದಂತೆ ಮಾಡಿದ ಕೃತ್ಯ ಅಲ್ಲ. ಎಲ್ಲವೂ ಪ್ಲ್ಯಾನ್ ಮಾಡಿಕೊಂಡು ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗುತ್ತಿದೆ. ಪ್ರೀ ಪ್ಲಾನ್ ಮಾಡಿಕೊಂಡು, ಅತ್ಯಾಧುನಿಕ ಬಾಂಬ್ ತಯಾರಿ ಮಾಡಿ, ಈ ಸ್ಫೋಟಕ ಇಡಲಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ; Bomb Blast; ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ; ಐಜಿಪಿ ಅಲೋಕ್ ಮೋಹನ್
ಸಿಎಂ ಸಿದ್ದರಾಮಯ್ಯ ಹೈಲೆವೆಲ್ ಮೀಟಿಂಗ್;
ಸಿಎಂ ಸಿದ್ದರಾಮಯ್ಯ ಹೈಲೆವೆಲ್ ಮೀಟಿಂಗ್; ಇನ್ನು ಸ್ಫೋಟಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಭೆ ಕರೆಯಲಾಗಿದೆ. ಇಂದು ಮಧ್ಯಾಹ್ನ 1 ಗಂಟೆಗೆ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ. ಘಟನೆಯ ವಿವರ, ತನಿಖೆಯ ಪ್ರಗತಿ ಹಾಗೂ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಈಗಾಗಲೇ ನಾಲ್ವರನ್ನು ವಶಕ್ಕೆ ತೆಗೆದುಕೊಂಡಿರುವುದರಿಂದ ಈ ಸಭೆ ಮಹತ್ವ ಪಡೆದುಕೊಂಡಿದೆ. ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಅಥವಾ ಗೃಹ ಸಚಿವ ಪರಮೇಶ್ವರ್ ಅವರು ಘಟನೆಯ ಬಗ್ಗೆ ಖಚಿತ ಮಾಹಿತಿ ನೀಡುವ ಸಾಧ್ಯತೆ ಇದೆ.
ಇದನ್ನೂ ಓದಿ; ಕುಂಬಳಕಾಯಿ ಹೂವು ಸೇವಿಸಿದರೆ ಇಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಾ..?