CrimePolitics

Breaking; ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌

ಬೆಂಗಳೂರು; ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ 17 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ  354 (A) ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಏನಿದು ಯಡಿಯೂರಪ್ಪ ವಿರುದ್ಧ ಆರೋಪ..?

ಫೆಬ್ರವರಿ 2ರಂದು ಸಹಾಯ ಕೇಳಿಕೊಂಡು ಯಡಿಯೂರಪ್ಪ ಬಳಿ ಹೋಗಿದ್ದೆವು. ಈ ವೇಳೆ ನನ್ನ 17 ವರ್ಷ ಮಗಳ ಮೇಲೆ ಯಡಿಯೂರಪ್ಪ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಕೇಸ್‌ ದಾಖಲಿಸಿದ್ದಾಳೆ. ಕಳೆದ ರಾತ್ರಿ ಸದಾಶಿವನಗರ ಪೊಲೀಸ್‌ ಠಾಣಗೆ ಬಂದಿರುವ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿ ದೂರು ದಾಖಲಿಸಿದ್ದಾಳೆ.

ಗಂಡನ ವಿರುದ್ಧವೇ ದೂರು ಕೊಟ್ಟಿದ್ದ ಮಹಿಳೆ;

ಯಡಿಯೂರಪ್ಪ ವಿರುದ್ಧ ದೂರು ಕೊಟ್ಟಿರುವ ಮಹಿಳೆ ಈ ಹಿಂದೆ ತನ್ನ ಗಂಡನ ವಿರುದ್ಧವೂ ದೂರು ಕೊಟ್ಟಿದ್ದಳು ಎಂದು ತಿಳಿದುಬಂದಿದೆ. ತನ್ನ ಗಂಡ ಸ್ವಂತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ಕೊಟ್ಟಿದ್ದಳು ಎಂದು ಹೇಳಲಾಗುತ್ತಿದೆ.

ಇದುವರೆಗೆ 53 ಕೇಸ್‌ಗಳನ್ನು ದಾಖಲಿಸಿರುವ ಮಹಿಳೆ;

ಬಲ್ಲ ಮೂಲಗಳ ಮಾಹಿತಿ ಪ್ರಕಾರ ಯಡಿಯೂರಪ್ಪ ವಿರುದ್ಧ ದೂರು ಕೊಟ್ಟಿರುವ ಮಹಿಳೆ ಈ ಹಿಂದೆಯೂ ಹಲವರ ವಿರುದ್ಧ ದೂರು ಕೊಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ. 2015ರಿಂದೀಚೆಗೆ ಇದೇ ಮಹಿಳೆ ಒಟ್ಟು 53 ಕೇಸ್‌ಗಳನ್ನು ದಾಖಲಿಸಿದ್ದಾಳೆ. ರಾಜಕಾರಣಿಗಳು, ಉದ್ಯಮಿಗಳು, ಪೊಲೀಸ್‌ ಅಧಿಕಾರಿಗಳ ವಿರುದ್ಧವೂ ಈ ಮಹಿಳೆ ದೂರುಗಳನ್ನು ದಾಖಲಿಸಿದ್ದಾಳೆ.

ಯಡಿಯೂರಪ್ಪ ವಿರುದ್ಧದ ಆರೋಪ ನಿಜವೇ..?

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಈಗ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆದ್ರೆ ಈ ಕೇಸ್‌ ಸತ್ಯಾಸತ್ಯತೆ ಬಗ್ಗೆ ತಿಳಿಯಬೇಕಿದೆ.. ಯಾಕಂದ್ರೆ ಕಳೆದ ಎಂಟು ವರ್ಷಗಳಲ್ಲಿ ಯಡಿಯೂರಪ್ಪ ವಿರುದ್ಧ ದೂರು ಕೊಟ್ಟ ಮಹಿಳೆ ಒಟ್ಟು 53 ಕೇಸ್‌ ಗಳನ್ನು ಹಲವರ ವಿರುದ್ಧ ದಾಖಲಿಸಿದ್ದಾಳೆ. ಹೀಗಾಗಿ, ಯಡಿಯೂರಪ್ಪ ವಿರುದ್ಧದ ಪ್ರಕರಣದ ಸತ್ಯಾಸತ್ಯತೆ ಹಿರಬರಬೇಕಿದೆ.

 

Share Post