BREAKING: ಸಿದ್ದರಾಮಯ್ಯ ಅವರಿಗೆ ಇನ್ನೂ ಎರಡು ದಿನ ರಿಲೀಫ್
ಬೆಂಗಳೂರು; ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್‌ಗೆ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಲಾಗಿದೆ.. ಸಿಎಂ ಸಿದ್ದರಾಮಯ್ಯ ಅವರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡನೆ ಮಾಡಿದರು.. ಮೊದಲು ಅರ್ಜಿದಾರರು, ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದರು.. ಈ ಪ್ರಕರಣದಲ್ಲಿ ರಾಜ್ಯಪಾಲರ ಅನುಮತಿ ಬೇಕಿರಲಿಲ್ಲ ಎಂದು ಹೇಳಿದ್ದಾರೆ.. ಹೀಗಾಗಿ ಅರ್ಜಿದಾರನಿಗೆ ದಂಡ ವಿಧಿಸಬೇಕು ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಅನ್ನು ಕೋರಿದ್ದಾರೆ..
ಇನ್ನು ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.. ಆದ್ರೆ ಅದರಲ್ಲಿ ಕಾರಣವನ್ನೇ ತಿಳಿಸಿಲ್ಲ.. ಸಿಎಂ ವಿರುದ್ಧ ಯಾವ ಕಾರಣಕ್ಕಾಗಿ ವಿಚಾರಣೆ ನಡೆಸಬೇಕು ಎಂಬುದನ್ನೇ ರಾಜ್ಯಪಾಲರು ಪ್ರಶ್ನೆ ಮಾಡಿಲ್ಲ ಎಂದು ಅಭಿಷೇಕ್ ಮನು ಸಿಂಘ್ವಿ ಹೇಳಿದರು..
ಮುಡಾದಿಂದ ತಮ್ಮ ಪತ್ನಿ ಹೆಸರಲ್ಲಿ ಬೆಲೆಬಾಳುವ 14 ಸೈಟ್‌ಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ.. ಇದು ಅಧಿಕಾರ ದುರ್ಬಳಕೆ ಮಾಡಿಕೊಂಡು ಈ ರೀತಿ ಮಾಡಲಾಗಿದೆ.. ಮುಡಾ ಅಧಿಕಾರಿಗಳು ಸಿಎಂ ಪತ್ನಿಗೆ ಅರಶಿನ ಕುಂಕುಮಕ್ಕೆ ಬಂದಿದ್ದ ಭೂಮಿಯನ್ನು ವಶಪಡಿಸಿಕೊಂಡಿತ್ತು.. ಇದಕ್ಕೆ ಬದಲಿ ನಿವೇಶನಗಳಾಗಿ, ಮೈಸೂರಿನ ವಿಜಯನಗರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟುಗಳನ್ನು ಮಂಜೂರು ಮಾಡಲಾಗಿದೆ.. ಇದರಲ್ಲಿ ಅಕ್ರಮ ನಡೆದಿದೆ ಎಂದು ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಕುಮಾರ್ ಎಂಬುವವರು ದೂರು ಸಲ್ಲಿಸಿದ್ದರು.. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದರು.. ಇದನ್ನು ರಾಜ್ಯಪಾಲರು ಪುರಸ್ಕರಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ..
ರಾಜ್ಯಪಾಲರ ಆದೇಶದ ವಿರುದ್ಧ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.. ರಾಜ್ಯಪಾಲರ ಆದೇಶಕ್ಕೆ ಮಧ್ಯಂತರ ತಡೆ ನೀಡಬೇಕೆಂದು ಸಿಎಂ ಹೈಕೋರ್ಟ್‌ನಲ್ಲಿ ಮನವಿ ಮಾಡಲಾಗಿತ್ತು.. ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನಿ ಸಿಂಘ್ವಿ ಅವರು ವಾದ ಮಂಡಿಸಿದರು..