BengaluruCrimePolitics

Breaking; ಸಂಜೆ ನಡೆಯಬೇಕಿದ್ದ ಸಂಪುಟ ಸಭೆ ರದ್ದು!

ಬೆಂಗಳೂರು; ಮುಡಾ ಹಗರಣದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.. ಈ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರದ ಬಗ್ಗೆ ಚರ್ಚೆ ಮಾಡಲು ಇಂದು ಸಂಜೆ 5 ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ಕರೆಯಲಾಗಿತ್ತು.. ಆದ್ರೆ ಇದೀಗ ಈ ಸಭೆಯನ್ನು ದಿಢೀರ್‌ ಅಂತ ರದ್ದು ಮಾಡಲಾಗಿದೆ..

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದರಿಂದ ಸಿಎಂ ಸಿದ್ದರಾಮಯ್ಯ ಅವರು ಹಲವು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ.. ಸೋಮವಾರ ಹೈಕೋರ್ಟ್‌ನಲ್ಲಿ ರಾಜ್ಯಪಾಲರ ಆದೇಶದ ವಿರುದ್ಧ ಅರ್ಜಿ ಸಲ್ಲಿಸಲು ಸಿದ್ಧತೆ ನಡೆದಿದೆ.. ಇನ್ನು ಆಗಸ್ಟ್‌ 20ರಂದು ಜನಪ್ರತಿನಿಧಿಗಳ ನ್ಯಾಯಾಲಯ ಖಾಸಗಿ ದೂರಿನ ಸಂಬಂಧ ಆದೇಶ ನೀಡಲಿದೆ.. ಇದಕ್ಕಿಂತ ಮೊದಲು ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ..

ಇನ್ನು ಈ ಬಗ್ಗೆ ಚರ್ಚೆ ಮಾಡೋದಕ್ಕೆ ಇಂದು ಸಂಜೆ ವಿಶೇಷ ಸಂಪುಟ ಸಭೆ ಕರೆಯಲಾಗಿತ್ತು.. ಈ ನಡುವೆ, ಹೈಕಮಾಂಡ್‌ ನಾಯಕರಾದ ವೇಣುಗೋಪಾಲ್‌ ಹಾಗೂ ರಣದೀಪ್‌ ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ. ನಿಮ್ಮ ಜೊತೆ ನಾವಿದ್ದೇವೆ ಎಂದು ಹೇಳಿದ್ದಾರೆ.. ಈ ಎಲ್ಲಾ ಬೆಳವಣಿಗೆಗಳ ನಂತರ ಸಂಜೆ ನಡೆಯಬೇಕಿದ್ದ ಸಂಪುಟ ಸಭೆ ರದ್ದು ಮಾಡಲಾಗಿದೆ..

Share Post