CrimeNational

ಮೋದಿ ಸಮಾವೇಶಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ; ಮೂವರ ಮರಣ

ಉತ್ತರಪ್ರದೇಶ : ಉತ್ತರಾಖಂಡ್‌ ಡೆಹ್ರಾಡೂನ್‌ನಲ್ಲಿ ನಡೆಯುತ್ತಿದ್ದ ಮೋದಿ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

    ಸಹರಾನ್ಪುರ ಜಿಲ್ಲೆಯ ದೆಹಲಿ-ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಹರಾನ್ಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೂರು ಲಕ್ಷ ನಗದು ಮತ್ತು ಐದು ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ ಬಿಹಾರಿಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post