ಕಣಿವೆಗೆ ಉರುಳಿ ಬಿದ್ದ ಬಸ್; 15 ಮಂದಿ ದುರ್ಮರಣ!
ದೋಡಾ; ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಬಸ್ ಕಣಿವೆಗೆ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಪೂರ್ಣ ಮಾಹಿತಿ ಹೊರಬರಬೇಕಿದೆ.
ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ 250 ಮೀಟರ್ ಆಳದ ಕಣಿವೆಗೆ ಬಿದ್ದಿದೆ. ಈ ಘಟನೆಯಲ್ಲಿ ಇದುವರೆಗೆ 15 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 20 ಕ್ಕೆ ಏರುವ ಸಾಧ್ಯತೆಯಿದೆ. ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ.