ಎರಡು ದಿನಗಳ ನಂತರ ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್ ಸಂಚಾರ ಆರಂಭ
ಬೆಳಗಾವಿ; ಗಡಿ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವೆ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ಕಳೆದ ಎರಡು ಮೂರು ದಿನಗಳಿಂದ ಪ್ರಯಾಣಿಕರು ಪರದಾಡುತ್ತಿದ್ದರು. ಆದ್ರೆ ಇದೀಗ ಮತ್ತೆ ವಾಹನ ಸಂಚಾರ ಆರಂಭಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರಿಗೆ ಕೊಂಚ ಸಮಾಧನ ತಂದಿದೆ.
ಎಂದಿನಂತೆ ಎರಡೂ ರಾಜ್ಯಗಳ ಬಸ್‌ಗಳು ಓಡಾಡುತ್ತಿವೆ. ಕೊಲ್ಲಾಪುರಕ್ಕೆ ತೆರಳುವ ಬಸ್‌ಗಳು ಬೆಳಗಾವಿ ನಗರದ ಹೊರವಲಯಗಳವರೆಗೆ ಮಾತ್ರ ಹೋಗಲಿವೆ. ಬೆಳಗಾವಿ ಭಾಗದಿಂದ ಮಹಾರಾಷ್ಟ್ರಕ್ಕೆ 400ಕ್ಕೂ ಹೆಚ್ಚು ಬಸ್‌ಗಳ ಸಂಚಾರ ಮಾಡುತ್ತಿವೆ.
ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿದ್ದ ಮರಾಠಿ ಪುಂಡರು ಮತ್ತು ಶಿವಸೇನೆ, ಎಂಇಎಸ್, ಸ್ವರಾಜ್ಯ ಸಂಘಟನೆ ಸೇರಿ ವಿವಿಧ ಸಂಘಟನೆಗಳ ಪುಂಡಾಟಿಕೆ ಹಿನ್ನೆಲೆ ಎರಡು ದಿನಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಬಸ್‌ಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಎರಡು ದಿನಗಳ ಬಳಿಕ ಇಂದಿನಿಂದ ಮತ್ತೆ ಬಸ್‌ಗಳ ಸಂಚಾರ ಪುನಾರಂಭ ಮಾಡಲಾಗಿದ್ದು ಪರಿಸ್ಥಿತಿ ಅವಲೋಕಿಸಿ ಹಂತ-ಹಂತವಾಗಿ ಬಸ್‌ಗಳ ಸಂಚಾರ ಆರಂಭ ಮಾಡಲಾಗುತ್ತದೆ.