CrimeNational

ಕಾರು ಅಡ್ಡಗಟ್ಟಿ, ಗನ್‌ ತೋರಿಸಿ ಲಕ್ಷಾಂತರ ರೂಪಾಯಿ ದರೋಡೆ

ನವದೆಹಲಿ; ದೆಹಲಿಯಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಬೈಕ್‌ಗಳಲ್ಲಿ ಗನ್‌ಗಳೊಂದಿಗೆ ಬಂದ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ್ದಾರೆ. ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ಈ ಘಟನೆ ನಡೆದಿದೆ.

ಚಾಂದಿನಿ ಚೌಕ್‌ನ ಓಮಿಯಾ ಎಂಟರ್‌ಪ್ರೈಸಸ್‌ನಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವ ಪಟೇಲ್ ಸಜನ್ ಕುಮಾರ್ ಅವರು ಕಾರಿನಲ್ಲಿ ಗುರುಗ್ರಾಮಕ್ಕೆ 2 ಲಕ್ಷ ರೂಪಾಯಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಜೊತೆಗೆ ಸ್ನೇಹಿತ ಜಿಗರ್‌ ಪಟೇಲ್‌ ಕೂಡಾ ಇದ್ದ. ಕಾರು ಪ್ರಗತಿ ಮೈದಾನ ಸುರಂಗ ಮಾರ್ಗಕ್ಕೆ ಬರುತ್ತಿದ್ದಂತೆ ಎರಡು ಬೈಕ್‌ಗಳಲ್ಲಿ ಬಂದ ಆಗಂತುಕರು ಕಾರನ್ನು ಅಡ್ಡಗಟ್ಟಿದ್ದಾರೆ. ಗನ್‌ ತೋರಿಸಿ ಹಣದ ಬ್ಯಾಗ್‌ ಕಿತ್ತುಕೊಂಡು ಪರಾರಿಯಾಗಿದ್ದಾರೆ.

Share Post