ಕಾರು-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; ನಾಲ್ವರ ಸ್ಥಿತಿ ಗಂಭೀರ!
ತುಮಕೂರು; ತುಮಕೂರು ಜಿಲ್ಲೆ ಕೊರಟಗೆರೆ ಬಳೀ ಭೀಕರ ಅಪಘಾತ ಸಂಭವಿಸಿದೆ.. ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ನಾಲ್ವರೂ ಗಾಯಾಗಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ..
ಬಸ್ ಇರಕಸಂದ್ರ ಕಾಮೋನಿಯಿಂದ ಕೋಳಾಲ ಕಡೆಗೆ ಹೋಗುತ್ತಿತ್ತು. ಇದೇ ವೇಳೆ ಬೆಂಗಳೂರಿನಿಂದ ಅಕ್ಕಿರಾಂಪುರಕ್ಕೆ ತೆರಳುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ.. ಬಸ್‌ನ ಹೊಡೆತಕ್ಕೆ ಕಾರು ಬಹುತೇಕ ನಜ್ಜುಗುಜ್ಜಾಗಿದೆ.. ಕಾರಿನಲ್ಲಿದ್ದ ನಾಲ್ವರೂ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ.. ಸ್ಥಳಕ್ಕೆ ಕೋಳಾಲ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ಮಾಡುತ್ತಿದ್ದಾರೆ..