CrimeNational

ಛತ್ತಿಸ್‌ಗಢದ ಕೊರಬಾ ಬಳಿ ಭೀಕರ ಅಪಘಾತ; ಏಳು ಮಂದಿ ದುರ್ಮರಣ

ಕೊರಬಾ; ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದು ಏಳು ಮಂದಿ ಸಾವನ್ನಪ್ಪಿರುವ ದಾರುಣ ಗಟನೆ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ರಾಯ್‌ಪುರದಿಂದ ಸರ್‌ಗುಜ ಕಡೆಗೆ ಸಂಚರಿಸುತ್ತಿತ್ತು. ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮಡಾಯಿ ಘಾಟಿ ಬಳಿ ಬಂದಾಗ ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ, ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಮಂದಿ ಬಸ್ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Share Post