ಹಬ್ಬದ ದಿನ ಗುರಾಯಿಸಿದ್ದಕ್ಕೆ ಇಬ್ಬರಿಗೆ ಚಾಕು ಇರಿತ
ದಾವಣಗೆರೆ; ರಾಮನವಮಿಯ ದಿನ ಗುರಾಯಿಸಿ ನೋಡಿದರು ಎಂಬ ಕಾರಣಕ್ಕೆ ಅನ್ಯಕೋಮಿನ ಯುವಕರು ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದಿದ್ದಾರೆ. ರಾಮನವಮಿ ದಿನ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತ, ಗೋಪಿ ಎಂಬುವವರಿಗೆ ಚಾಕುವಿನಿಂದ ಇರಿಯಲಾಗಿದೆ. ಗುರಾಯಿಸಿದರು ಎಂಬ ಕಾರಣಕ್ಕೆ ಎರಡು ಗುಂಪುಗಳಿಂದ ಘರ್ಷಣೆ ನಡೆದಿದೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.