ಬಸ್ ಅಪಘಾತ ಕೇಸ್:ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ- ಸಿಎಂ ಹಾಗೂ ಗೃಹ ಸಚಿವ ಭರವಸೆ
ಸುರಪುರ: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಎಂಟು ಜನ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿಯವರು ಪ್ರತಿಕ್ರಿಯೆ ನೀಡಿದ್ದಾರೆ. ಈ ದುರಂತ ನಮ್ಮ ಗಮನಕ್ಕೂ ಬಂದಿದೆ. ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕುಟುಂಬಸ್ಥರಿಗೆ ಪರಿಹಾರ ನೀಡುವ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಚರ್ಚೆ ನಡೆಸಿ ಈ ಬಗ್ಗೆ ತಿಳಿಸುವುದಾಗಿ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸಿಎಂ ಬೊಮ್ಮಾಯಿಯವರು ಹೇಳಿದ್ರು.
ಜಿಲ್ಲಾಡಳಿತ ಎಲ್ಲಾ ಕ್ರಮ ಕೈಗೊಂಡಿದೆ
ಇನ್ನೂ ಘಟನೆ ಬಗ್ಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಈಗಾಗಲೇ ನಮ್ಮ ತುಮಕೂರು ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಪಾವಗಡ ತಾಲೂಕು ಆಸ್ಪತ್ರೆ ಹಾಗೂ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡುವ ಕೆಲಸ ಮಾಡ್ತಿದಾರೆ. ಗಾಯಾಳುಗಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯ ನೀಡುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ. ಅಗತ್ಯ ಇದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ವ್ಯವಸ್ಥೆ ಮಾಡಲಾಗುವುದು ಎಂಬ ಮಾತನ್ನು ಹೇಳಿದ್ದಾರೆ.