CrimeNational

ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ಕೂಲಿ ಕಾರ್ಮಿಕರು ಸಾವು

ಪುಣೆ: ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಐವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯ ಯರವಾಡ ಶಾಸ್ತ್ರಿ ನಗರದಲ್ಲಿ ನಡೆದಿದೆ. ಶಾಪಿಂಗ್ ಮಾಲ್ ಕಟ್ಟಡ ನಿರ್ಮಾಣವಾಗುತ್ತಿದ್ದು, ಅಲ್ಲಿ ಸ್ಲ್ಯಾಬ್ ಹಾಕುವ ಕೆಲಸ ನಡೆಯುತ್ತಿತ್ತು.

ಗುರುವಾರ ಮಧ್ಯರಾತ್ರಿ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಬಿದ್ದಿದೆ. ಐವರು ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ರೆ ಇನ್ನೈದು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು.

ಅವಶೇಷಗಳಡಿ ಸಿಲುಕಿದ್ದವರನ್ನು ಹೊರ ತೆಗೆಯಲಾಯಿತು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪುಣೆ ಡಿಸಿಪಿ ರೋಹಿದಾಸ್ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ. ಮೃತರೆಲ್ಲರೂ ಬಿಹಾರ ಮೂಲದವರೆಂದು ತಿಳಿದುಬಂದಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

Share Post