ಮುಂಬೈನ ಹೋಟೆಲ್‌ನಲ್ಲಿ ರೂಪದರ್ಶಿ ಆತ್ಮಹತ್ಯೆ
ಮುಂಬೈ; ಮುಂಬೈನ ಅಂಧೇರಿಯ ಹೋಟೆಲ್ ಒಂದರ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ರೂಪದರ್ಶಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
‘ನನ್ನನ್ನು ಕ್ಷಮಿಸಿ, ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನು ಸಂತೋಷವಾಗಿಲ್ಲ. ನನಗೆ ಶಾಂತಿ ಬೇಕು’ ಎಂದು ಡೆತ್‌ನೋಟ್‌ನಲ್ಲಿ ರೂಪದರ್ಶಿ ಬರೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೂಪದರ್ಶಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೊಟೇಲ್‌ನಲ್ಲಿ ಊಟಕ್ಕೆ ಆರ್ಡರ್ ಮಾಡಿದ್ದರು. ಆದ್ರೆ, ಗುರುವಾರ ಬೆಳಗ್ಗೆ ಸ್ವಚ್ಛತಾ ಸಿಬ್ಬಂದಿ ಪದೇ ಪದೇ ಬೆಲ್ ಮಾಡಿದರೂ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದರು.