CrimeNational

ತಮಿಳುನಾಡಿನಲ್ಲಿ ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಐವರ ಸಾವು

ಚೆನ್ನೈ; ತಮಿಳುನಾಡಿನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ- ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ನಡೆದಿದೆ. 2 ಖಾಸಗಿ ಬಸ್‍ಗಳು, 2 ಲಾರಿಗಳು ಹಾಗೂ 2 ಕಾರುಗಳು ಪರಸ್ಪರ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದಾರೆ. ಆದ್ರೆ ಇನ್ನೂ ಮೃತರ ಗುರುತು ಪತ್ತೆಯಾಗಿಲ್ಲ.

ವೇಪ್ಪೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ, ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಕಾರು ನೋಂದಣಿ ಪುಸ್ತಕದ ಪ್ರಕಾರ, ವಾಹನವು ಚೆನ್ನೈನ ನಂಗನಲ್ಲೂರ್‌ಗೆ ಸೇರಿದೆ.

Share Post