ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 9 ಕೋಟಿ ರೂ. ವಿದೇಶಿ ಕರೆನ್ಸಿ ಪತ್ತೆ
ಕೋಲ್ಕತ್ತಾ; ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ 9 ಕೋಟಿ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದೆ. ಈ ಸಂಬಂಧ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ.
ವ್ಯಕ್ತಿಯೊಬ್ಬ ಗುರುವಾರ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ದುಬೈಗೆ ತೆರಳುವ ವಿಮಾನ ಹತ್ತಬೇಕಿತ್ತು. ತಪಾಸಣೆ ವೇಳೆ ಗೌತಮ್ ರವಿಶಂಕರ್ ಅವರ ಬ್ಯಾಗ್ ನಲ್ಲಿ 41 ಲಕೋಟೆಗಳು ಪತ್ತೆಯಾಗಿವೆ. ಅನುಮಾನಗೊಂಡ ವಿಮಾನ ನಿಲ್ದಾಣದಲ್ಲಿ ನಿಯೋಜಿತ ಭದ್ರತಾ ಸಿಬ್ಬಂದಿ ಆತನ ಬ್ಯಾಗ್ ತೆರೆದು ಪರಿಶೀಲಿಸಿದ್ದಾರೆ. ಕವರ್‌ಗಳಲ್ಲಿ ಹೆಚ್ಚಿನ ಪ್ರಮಾಣದ ವಿದೇಶಿ ಕರೆನ್ಸಿ ಇರುವುದು ಕಂಡುಬಂದಿದೆ. ವ್ಯಕ್ತಿಯನ್ನು ಕಸ್ಟಮ್ಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ.