CrimePolitics

ಸುಪ್ರೀಂನಲ್ಲೂ ಡಿ.ಕೆ.ಶಿವಕುಮಾರ್‌ ಅರ್ಜಿ ತಿರಸ್ಕೃತ; ಡಿಸಿಎಂಗೆ ಸಿಬಿಐ ಸಂಕಷ್ಟ

ನವದೆಹಲಿ; ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪವಿದೆ.. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಈ ಪ್ರಕರಣವನ್ನು ರದ್ದು ಮಾಡುವಂತೆ ಡಿ.ಕೆ.ಶಿವಕುಮಾರ್‌ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.. ಆದ್ರೆ ಸುಪ್ರೀಂಕೋರ್ಟ್‌ ಡಿ.ಕೆ.ಶಿವಕುಮಾರ್‌ ಅವರ ಅರ್ಜಿಯನ್ನು ತಿರಸ್ಕಾರ ಮಾಡಿದೆ..

ಇದನ್ನೂ ಓದಿ; ಹೆಂಡತಿ ತವರಿಗೆ ಹೋದಾಗ ಗಂಡ ಮಾಡೋ ಕೆಲಸಗಳೇನು ಗೊತ್ತಾ..?

ಇದರಿಂದಾಗಿ ಡಿ.ಕೆ.ಶಿವಕುಮಾರ್‌ ಅವರು ಪ್ರಕರಣದ ವಿಚಾರಣೆ ಎದುರಿಸುವ ಅನಿವಾರ್ಯತೆ ಎದುರಾಗಿದೆ..
ಡಿ.ಕೆ.ಶಿವಕುಮಾರ್‌ ಅವರು ಈ ಮೊದಲು ಹೈಕೋರ್ಟ್‌ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.. ಸಿಬಿಐ ತನಿಖೆಯನ್ನು ರದ್ದು ಮಾಡುವಂತೆ ಕೋರಿದ್ದರು.. ಆದ್ರೆ ಹೈಕೋರ್ಟ್‌ ಇದನ್ನು ತಿರಸ್ಕಾರ ಮಾಡಿತ್ತು.. ಹೀಗಾಗಿ, ಡಿ.ಕೆ.ಶಿವಕುಮಾರ್‌ ಅವರು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.. ಆದ್ರೆ ಸುಪ್ರೀಂಕೋರ್ಟ್‌ ಪೀಠ ಕೂಡಾ ಡಿಕೆಶಿ ಮನವಿಯನ್ನು ತಿರಸ್ಕಾರ ಮಾಡಿದೆ.. ಹೈಕೋರ್ಟ್‌ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಕೋರ್ಟ್‌ ಹೇಳಿದೆ..

ಇದನ್ನೂ ಓದಿ; ನಿಂತಿದ್ದ ಐಶಾರಾಮಿ ಬಸ್‌ಗೆ ಲಾರಿ ಡಿಕ್ಕಿ; 6 ಮಂದಿ ದುರ್ಮರಣ!

2017ರಲ್ಲಿ ಡಿ.ಕೆ.ಶಿವಕುಮಾರ್ ಅವರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.. ಆಗ ಡಿ.ಕೆ.ಶಿವಕುಮಾರ್‌ ಅವರು ಕೋಟ್ಯಂತರ ರೂಪಾಯಿ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದರು.. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಇದರ ವಿಚಾರಣೆ ಶುರು ಮಾಡಿದ್ದರು.. ಇದರ ನಡುವೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು..

Share Post