ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ
ಯಾದಗಿರಿ; ಯಾದಗಿರಿಯಲ್ಲಿ ಅಂತರ್ ಧರ್ಮೀಯ ಕೊಲೆ ನಡೆದಿದೆ. ಶಗಾಪುರಪೇಟೆ ಬಡಾವಣೆಯಲ್ಲಿ ಮುಸ್ಲಿಂ ಯುವಕನೊಬ್ಬ ದಲಿತ ಯುವಕನನ್ನು ಕೊಲೆ ಮಾಡಿದ್ದಾನೆ. 22 ವರ್ಷದ ರಾಕೇಶ್ ಕೊಲೆಯಾದ ಯುವಕನಾಗಿದ್ದಾನೆ.. ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಹಾಗೂ ಇತರ ನಾಲ್ವರು ಸೇರಿಕೊಂಡು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ..
ನಿನ್ನೆ ರಾತ್ರಿ ರೊಟ್ಟಿ ತರಲು ರಾಕೇಶ್ ರೊಟ್ಟಿ ಕೇಂದ್ರಕ್ಕೆ ಹೋಗಿದ್ದ. ಇದೇ ವೇಳೆ ರೊಟ್ಟಿ ಕೇಂದ್ರದ ಫಯಾಜ್ ಜೊತೆ ಜಗಳವಾಗಿದೆ. ರಾಕೇಶ್ ಮನೆಗೆ ಮರಳಿದ ನಂತರ ಮತ್ತೆ ಜಗಳವಾಗಿದ್ದು, ಈ ವೇಳೆ ರಾಕೇಶ್ನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಲಾಗಿದೆ.
ಇದಾದ ನಂತರ ಬಿಜೆಪಿ ಮುಖಂಡರ ನೆರವು ಪಡೆದು ಕೊಲೆಯಾದ ರಾಕೇಶ್ ತಾಯಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಸಂಗೀತಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.