ಗಾಂಧಿ ಭಾವಚಿತ್ರಕ್ಕೆ ಹಾನಿ; ರಾಹುಲ್ ಗಾಂಧಿ ಕಚೇರಿ ಸಿಬ್ಬಂದಿ ಅರೆಸ್ಟ್
ವಯನಾಡ್; ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ ಎಸಗಿದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಇಬ್ಬರು ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಎರಡು ತಿಂಗಳ ಹಿಂದೆ ಎಸ್‌ಎಫ್‌ಐ ಕಾರ್ಯಕರ್ತರು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಹಾನಿ ಮಾಡಲಾಗಿತ್ತು.
ಈ ಘಟನೆ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ರಾಹುಲ್ ಗಾಂಧಿ ಕಚೇರಿಯ ಸಿಬ್ಬಂದಿ ಎಂದು ತಿಳಿದುಬಂದಿದೆ. ಇನ್ನಿಬ್ಬರು ಕೂಡಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಎಂದು ಹೇಳಲಾಗುತ್ತಿದೆ. ‘ಜೂನ್ 24ರಂದು ಎಸ್‌ಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಹುಲ್ ಗಾಂಧಿ ಅವರ ಕಚೇರಿಗೆ ಹಾನಿ ಮಾಡಿದ್ದರು. ಆ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರ ಕಚೇರಿಯಲ್ಲಿದ್ದ ಮಹಾತ್ಮ ಗಾಂಧಿ ಭಾವಚಿತ್ರಕ್ಕೂ ಹಾನಿ ಮಾಡಲಾಗಿತ್ತು’ ಎಂದು ಕಾಂಗ್ರೆಸ್ ಆರೋಪಿಸಿತ್ತು.