ನನ್ನನ್ನು ರೇಪ್ ಮಾಡುವುದಾಗಿ ಬೆದರಿಸ್ತಿದ್ದಾರೆ; ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ
ನವದೆಹಲಿ; ಕೆಲವರು ನನ್ನನ್ನು ರೇಪ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಗೋಳು ತೋಡಿಕೊಂಡಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಕೆಲವರು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ನನಗೆ ಬೆದರಿಕೆ ಹಾಕುತ್ತಿದ್ದಾರೆಂದು ದೂರಿದ್ದಾರೆ.
ಸಾಜಿದ್ ಖಾನ್ ರನ್ನು ಬಿಗ್ ಬಾಸ್ ಮನೆಯಿಂದ ಹೊರಹಾಕುವಂತೆ ನಾನು ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೆ. ಅಂದಿನಿಂದ ನನಗೆ ಬೆದರಿಕೆಗಳು ಬರುತ್ತಿವೆ. ಇನ್‌ಸ್ಟಾಗ್ರಾಮ್ ನಲ್ಲಿ ನನಗೆ ಮೆಸೇಜ್ ಮಾಡುತ್ತಿದ್ದು, ಅತ್ಯಾಚಾರ ಮಾಡುವುದಾಗಿ ಬೆದರಿಸುತ್ತಿದಾರೆ ಎಂದು ಸ್ವಾತಿ ತಿಳಿಸಿದ್ದಾರೆ.
ಈ ಬಗ್ಗೆ ನಾನು ದೆಹಲಿ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಸ್ವಾತಿ ಹೇಳಿದ್ದಾರೆ.