ಜಾರ್ಖಂಡ್ ಸಿಎಂ ಆಪ್ತನ ಮನೆಯಲ್ಲಿ ಸಿಕ್ಕವು ಎರಡು AK-47 ರೈಫಲ್ಸ್
ರಾಂಚಿ; ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಆಪ್ತರು ಎಂದು ಹೇಳಲಾಗ್ತಿರುವ ಉದ್ಯಮಿ ಪ್ರೇಮ್ ಪ್ರಕಾಶ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಚ್ಚರಿ ಎಂಬಂತೆ, ಎರಡು ಎಕೆ 47 ರೈಫಲ್ಸ್ ಪತ್ತೆಯಾಗಿದ್ದು, ಅವುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಜಾರ್ಖಂಡ್ ರಾಜ್ಯದಲ್ಲಿ ನಡೆದಿರುವ 100 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಪ್ರೇಮ್ ಪ್ರಕಾಶ್ ಮನೆ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಈ ದಾಳಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 20 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಪಕ್ಕದ ರಾಜ್ಯಗಳಾಗಿರುವ ಬಿಹಾರ, ತಮಿಳುನಾಡು ಮತ್ತು ದೆಹಲಿ ಎನ್ಸಿಆರ್ನಲ್ಲೂ ಪರಿಶೀಲನೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.