CrimeNational

ಕಲ್ಲಿದ್ದಲು ಕಳ್ಳಸಾಗಣೆ ಹಗರಣ; 8 ಐಪಿಎಸ್‌ ಅಧಿಕಾರಿಗಳಿಗೆ ಸಮನ್ಸ್‌

ಕೋಲ್ಕತ್ತ; ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಸಮನ್ಸ್‌ ಜಾರಿ ಮಾಡಿದ್ದಾರೆ.

ಐಪಿಎಸ್ ಅಧಿಕಾರಿಗಳಾದ ಎಡಿಜಿ, ಸಿಐಡಿ ಜ್ಞಾನವಂತ್ ಸಿಂಗ್, ಕೋಟೇಶ್ವರ ರಾವ್, ಎಸ್. ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್ ಮತ್ತು ತಥಾಗತ ಬಸು ಅವರಿಗೆ ಸಮನ್ಸ್‌ ನೀಡಲಾಗಿದೆ. ದೆಹಲಿಯ ಕಚೇರಿಯಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗಲು ಐಪಿಎಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿಯೊಬ್ಬರಿಗೂ ನಿರ್ದಿಷ್ಟ ದಿನಾಂಕಗಳನ್ನು ನೀಡಲಾಗಿದೆ.

‘ಈ ಐಪಿಎಸ್ ಅಧಿಕಾರಿಗಳು ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಈ ಹಗರಣದಿಂದ ಅವರು ಲಾಭ ಪಡೆದಿದ್ದಾರೆ ಎಂಬುದಕ್ಕೆ ಪುರಾವೆಗಳಿವೆ. ಕಳ್ಳಸಾಗಣೆ ನಡೆದ ಪ್ರದೇಶಗಳಲ್ಲಿ ಅವರೆಲ್ಲರನ್ನು ನಿಯೋಜಿಸಲಾಗಿತ್ತು’ ಎಂದು ಇಡಿ ಅಧಿಕಾರಿ ತಿಳಿಸಿದ್ದಾರೆ.

Share Post