CrimeNational

ಅಕ್ರಮ ಹಣ ವರ್ಗಾವಣೆ ಪ್ರಕರಣ; ದೆಹಲಿ ಆರೋಗ್ಯ ಸಚಿವರ ಮನೆ ಮೇಲೆ ರೇಡ್‌

ನವದೆಹಲಿ; ದೆಹಲಿ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತ್ತಾ ಮೂಲದ ಕಂಪನಿ ಸಂಬಂಧ ಹವಾಲಾ ವಹಿವಾಟು ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.  

 

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಬಂಧನಕ್ಕೊಳಗಾಗಿದ್ದಾರೆ. ಮೇ 30 ರಂದು ಸತ್ಯೇಂದ್ರ ಜೈನ್‌ ಅವರನ್ನು ಬಂಧಿಸಲಾಗಿದ್ದು,  ಜೂನ್ 9ರವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾರೆ. ಸತ್ಯೇಂದ್ರ ಜೈನ್ ಕುಟುಂಬದ ಒಡೆತನದಲ್ಲಿರುವ 4.81 ಕೋಟಿ ರೂ. ಮೌಲ್ಯದ 5 ಸಂಸ್ಥೆಗಳಿಗೆ ಸೇರಿದ ಸ್ಥಿರಾಸ್ತಿಯನ್ನು ಏಪ್ರಿಲ್ ತಿಂಗಳಲ್ಲಿ ಇಡಿ ಜಪ್ತಿ ಮಾಡಿತ್ತು.

2018ರಲ್ಲಿ ಕೂಡಾ ಇಡಿ ಅಧಿಕಾರಿಗಳು ಸತ್ಯೇಂದ್ರ ಜೈನ್‌ ಅವರನ್ನು ವಿಚಾರಣೆ ನಡೆಸಿದ್ದರು.

 

Share Post